
ಇಂದು ಬೆಳಗಾವಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-
ಕರ್ನಾಟಕ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ವಿಧಾನಸಭೆಯ ಸ್ವೀಕರ್ ಆದ ನಂತರ ಇದೇ ಮೊದಲ ಬಾರಿಗೆ ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಶಿರಸಿಯಿಂದ ಬೆಳಗ್ಗೆ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಳಗಾವಿಗೆ ಆಗಮಿಸಲಿರುವ ಅವರು, ಸಂಜೆ 4 ಗಂಟೆಗೆ ಗುರುದೇವ ರಾನಡೆ ಮಂದಿರದಲ್ಲಿ ರಾನಡೆಯವರ ಕುರಿತ ಪುಸ್ತಕವೊಂದನ್ನು ಬಿಡುಗಡೆ ಮಾಡಲಿದ್ದಾರೆ. ಸಂಜೆ ಬೆಳಗಾವಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಹಿಂದವಾಡಿಯ ಗುರುದೇವ ರಾಮನಡೆ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅರವಿಂದ ರಾವ್ ದೇಶಪಾಂಡೆ ಮತ್ತು ಅಶ್ವಿನಿ ಅವಿನಾಶ ಜೋಗ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ