ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಹುಸಿ ಬಾಂಬ್ ಬೆದರಿಕೆ ಕರೆ ಹಾಕಿದ್ದ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜ.6ರಂದು ವಿಶ್ವೇಶ್ವರಯ್ಯ ಮ್ಯೂಸಿಎಂ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಮಾಡಲಾಗಿತ್ತು. ಮ್ಯೂಸಿಯಂ ನಲ್ಲಿ ಹಲವು ಸ್ಫೋಟಕಗಳನ್ನು ಇಡಲಾಗಿದ್ದು, ಎಲ್ಲವೂ ಸ್ಫೋಟಗೊಳ್ಳಲಿದೆ ಎಂದು ಮೇಲ್ ಕಳುಹಿಸಿ ಉಗ್ರ ಸಂಘಟನೆಯೊಂದರ ಹೆಸರನ್ನು ಉಲ್ಲೇಖಿಸಲಾಗಿತ್ತು.
ಮ್ಯೂಸಿಯಂ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ