Belagavi NewsBelgaum NewsKannada NewsKarnataka NewsLatestPolitics
*ಬೆಳಗಾವಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ*

ಬೆಳಗಾವಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಹಾಗೂ ಆಯೋಗದ ಸದಸ್ಯರು ಜನವರಿ 7 ರಂದು ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಸ್ಥಳೀಯವಾಗಿ ವಿವಿಧೆಡೆ ಭೇಟಿ ನೀಡಲಿದ್ದಾರೆ. ನಂತರ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಧ್ಯಾಹ್ನ 2 ರಿಂದ 3.30 ರವರೆಗೆ ಆಯೋಗದಲ್ಲಿರುವ ಪ್ರಕರಣಗಳ ಕುರಿತು ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 3.30 ರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಆಯೋಗದ ಅಧ್ಯಕ್ಷರು ಸಭೆಯನ್ನು ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳನ್ನು ಕೂಡ ಆಯೋಗ ಸ್ವೀಕರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.




