Latest

*ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಸಭೆ ನಡೆಸಿ ಮಾತನಾಡಿದ ಸಿಎಂ ಬೊಮ್ಮಾಯಿ, ವಿಐಎಸ್ಎಲ್ ಅತ್ಯಂತ ಮಹತ್ವದ ಕಾರ್ಖಾನೆ. ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು.

ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ
ಕೇಂದ್ರ ಸರ್ಕಾರ ಡಿಸ್ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.
ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ‌ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

*ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್*

https://pragati.taskdun.com/d-k-shivakumarbhadravatipressmeet/

Related Articles

Back to top button