
ಪ್ರಗತಿವಾಹಿನಿ ಸುದ್ದಿ: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮಗೊಳಿಸಿರುವ ಘಟನೆ ಬೆಂಗಳೂರಿನ ಅಭಿಮಾನ್ ಸ್ಟುಡುಯೋದಲ್ಲಿ ನಡೆದಿದೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ನಿರ್ದೇಶಕ ರವಿ ಶ್ರೀವತ್ಸ ಭೇಟಿ ನೀಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ ಎನ್ನಲಾಗಿದೆ.
ಅಭಿಮಾನ್ ಸ್ಟುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಅಭಿಮಾನಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದ್ದರೂ ಕೂಡ ಅಂತ್ಯಸಂಸ್ಕಾರ ನಡೆದ ಸ್ಥಳದ ಬಗ್ಗೆ ಅಭಿಮಾನಿಗಳಿಗೆ ಭಾವನಾತ್ಮಕ ನಂಟು ಇತ್ತು. ಆದರೆ ಈಗ ಸಮಾಧಿ ಸ್ಥಳ ನೆಲಸಮ ಮಾಡಿರುವುದಕ್ಕೆ ರವಿ ಶ್ರೀವತ್ಸಾ ಕಣ್ಣೀರಿಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದಾರೆ. ನಟ ಬಾಲಣ್ಣ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ನಡುವೆ ವಾಗ್ವಾದ ನಡೆದ ಘಟನೆಯೂ ನಡೆದಿದೆ.