
ಪ್ರಗತಿವಾಹಿನಿ ಸುದ್ದಿ;ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಶುಕ್ರವಾರ (ಫೆ.24) ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ ಹಾಗೂ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ವಿದ್ಯಾಶಂಕರ್ ಅವರು ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 22 ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಅಧ್ಯಕ್ಷರಾದ ಪ್ರೊ. ಟಿ.ಜಿ ಸೀತಾರಾಮ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಸಿ.ಎನ್.ಅಶ್ವತ್ ನಾರಾಯಣ್ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಗೌರವ ಡಾಕ್ಟರೇಟ್ ಪದವಿ ಪ್ರಧಾನ:
ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಉಪಾಧ್ಯಕ್ಷರಾದ ವಿಕ್ರಮ್ ಕಿರ್ಲೋಸ್ಕರ್, WABCO India Ltd, and TVS Automotive Solutions Pvt, Ltd ಅಧ್ಯಕ್ಷರಾದ ಎಮ್. ಲಕ್ಷ್ಮೀನಾರಾಯಣ, Belgaum Ferrocast India Pvt, Ltd ವ್ಯವಸ್ಥಾಪಕ ನಿರ್ದೇಶಕರಾದ ಸಚಿನ್ ಸಬ್ನಿಸ್ ಅವರಿಗೆ “ಡಾಕ್ಟರ್ ಆಫ್ ಸೈನ್ಸ್” ಗೌರವ ಪದವಿ ಪ್ರಧಾನ ಮಾಡಲಾಗುವದು.
ಘಟಿಕೋತ್ಸವದಲ್ಲಿ ಬಿಇ/ಬಿ.ಟೆಕ್-51905, ಬಿ.ಪ್ಲಾನ್-9, ಬಿ.ಆರ್ಚ್-1032, ಎಂಬಿಎ-4279, ಎಂಸಿಎ-2028, ಎಂ.ಟೆಕ್-1363, ಎಂ.ಆರ್ಚ್-82 ಮತ್ತು 1 ಪಿಜಿ ಡಿಪ್ಲೊಮಾ ಮತ್ತು ಸಂಶೋಧನಾ ಅಧ್ಯಯನ ಮುಗಿಸಿದ 700 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಹಾಗೂ 2 ಎಂ.ಎಸ್.ಸಿ ಬೈ ರಿಸರ್ಚ್, 04 ಇಂಟಿಗ್ರೇಡಿಯಟ್ ಡ್ಯುಯಲ್ ಡಿಗ್ರಿ ಪದವಿಗಳನ್ನು ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಚಿನ್ನದ ಪದಕ:


ಬೆಂಗಳೂರು ಎ.ಸಿ.ಎಸ್ ಕಾಲೇಜ ಆಫ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಆಫ್ ಇಂಜಿನಿಯರಿಂಗ್ ವಿಭಾಗದ ಸ್ವಾತಿ.ಎಸ್ 7 ಚಿನ್ನದ ಪದಕ ಪಡೆದಿರುತ್ತಾರೆ.
ಬೆಂಗಳೂರಿನ ಸರ್.ಎಂ ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಸುಶ್ಮಿತಾ ಎಸ್. ವಿ 6 ಚಿನ್ನದ ಪದಕ, ಬಿ.ಎನ್. ಎಮ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಪೂಜಾ ಬಾಸ್ಕೇರ ವಿಧ್ಯಾರ್ಥಿನಿ 6 ಚಿನ್ನದ ಪದಕ ಪಡೆದಿರುತ್ತಾಳೆ.
ಅದೇ ರೀತಿಯಲ್ಲಿ ಬೆಂಗಳೂರಿನ ಆರ್.ಎನ್.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟ್ರುಮೆಂಟೇಷನ್ ವಿಭಾಗದ ಅಭಿಲಾಷ ಎಮ್.4 ಚಿನ್ನದ ಪದಕ, ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಫರ್ಮೇಷನ್ ಸೈಯನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಯುವಿಕಾ ರಮೇಶ್ ಬಾಬು 4 ಚಿನ್ನದ ಪದಕ,
ಆರ್.ಎನ್.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ಹರ್ಷವರ್ಧಿನಿ.ಜೆ 4 ಚಿನ್ನದ ಪದಕ,
ಬಿಎಂಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅರ್ಜುನ್. ಯು. ಕೆ 3 ಚಿನ್ನದ ಪದಕ ಹಾಗೂ ದಾವಣಗೆರೆ ಯುಬಿಟಿಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂ.ಟೆಕ್ ವಿಭಾಗದ ಸಂಗೀತ ಜಿ. ಆರ್ 2 ಚಿನ್ನದ ಪದಕ ಗಳಿಸಿರುತ್ತಾರೆ.
ಗೋಲ್ಡನ್ ಚಾನ್ಸ್:
ವಿಟಿಯು ಸ್ಥಾಪಿತಗೊಂಡಿರುವ 1998 ರಿಂದ ವಿಷಯ ಬಾಕಿ ಉಳಿಸಿಕೊಂಡಿರುವ ಬಿಇ, ಬಿ.ಆರ್ಚ್, ಎಂಸಿಎ, ಎಂಬಿಎ, ಎಂ.ಟೆಕ್ ವಿದ್ಯಾರ್ಥಿಗಳಿಗೆ ಗೋಲ್ಡನ್ ಚಾನ್ಸ್ ನೀಡುವ ಮೂಲಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ವಿದ್ಯಾಶಂಕರ್.ಎಸ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕುಲಸಚಿವರಾದ ಬಿ.ಇ ರಂಗಸ್ವಾಮಿ, ಮೌಲ್ಯ ಮಾಪನ ಕುಲಸಚಿವರಾದ ಟಿ.ಎನ್ ಶ್ರೀನಿವಾಸ ಅವರು ಪತ್ರಿಕಾಗೋಷ್ಠಿಯಲ್ಲಿ ಉಸ್ಥಿತರಿದ್ದರು.
ಗೌರವ ಡಾಕ್ಟರೇಟ್ ಪಡೆಯಲಿರುವವರು ಪರಿಚಯಕ್ಕೆ ಇಲ್ಲಿ ಕ್ಲಿಕ್ ಮಾಡಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ