ವಿಷಾನಿಲ ಸೋರಿಕೆ: 8 ಜನರ ಸಾವು

ಪ್ರಗತಿವಾಹಿನಿ ಸುದ್ದಿ; ವಿಶಾಖಪಟ್ಟಣಂ: ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 8 ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದರು. ಇಬ್ಬರು ಮಕ್ಕಳು ಸೇರಿದಂತೆ 8 ಜನ ಸಾವನ್ನಪ್ಪಿದ್ದಾರೆ.

Home add -Advt

ವಿಷ ಅನಿಲ ಸುತ್ತಮುತ್ತಲಿನ 3 ಕಿ.ಮೀ. ದೂರದರೆಗೂ ಹರಡಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆ ನಡೆದ ಜಾಗಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಸಾಯನಿಕದಿಂದ ಮೈ, ಕಣ್ಣು ತುರಿಕೆ, ಉರಿಯಿಂದ ಪರದಾಡುತ್ತಿದ್ದವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Related Articles

Back to top button