LatestWorld

*BIG BREAKING: ದೆಹಲಿಗೆ ವಾಪಸ್ ಆದ ಏರ್ ಇಂಡಿಯಾ ವಿಮಾನ*

ಪ್ರಗತಿವಾಹಿನಿ ಸುದ್ದಿ: ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟಗೊಂಡಿರುವ ವರದಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ.

ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಂದ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ ಆಗಿದೆ. ವಿಮಾನ ದೆಹಲಿ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಇನ್ನೊಂದೆಡೆ ಬಾಲಿಗೆ ತೆರಳಬೇಕಿರುವ 12ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ಪೂರ್ವ ಇಂಡೋನೇಷ್ಯಾದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳು ಕಾರ್ಯಾಚರಣೆ ಸ್ಥಗಿತಗೊಳಿಸುವೆ.

ಬಾಲಿಗೆ ಹೊರಟಿದ್ದ ಏರ್ ಇಂಡಿಯಾ, ಸಿಂಗಾಪುರ್ ಏರ್ ಲೈನ್ಸ್, ಏರ್ ನ್ಯೂಜಿಲ್ಯಾಂಡ್, ಜೆಟ್ ಸ್ಟಾರ್, ವರ್ಜಿನ್ ಆಸ್ಟ್ರೇಲಿಯಾ ಮತ್ತು ಚೀನಾದ ಜುನ್ಯಾವೋ ಏರ್ ಲೈನ್ಸ್ ವಿಮಾನಗಳು ರದ್ದಾಗಿವೆ.

Related Articles

Back to top button