Kannada NewsKarnataka NewsLatestNationalPolitics
*ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ‘ಕೈ’ ಘಟಾನುಘಟಿ ನಾಯಕರು ಭಾಗಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿರುವ ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಎಲ್ಲಾ ರಾಜ್ಯಗಳ ಕಾಂಗ್ರೆಸ್ ನ ಘಟಾನುಘಟಿ ನಾಯಕರು, ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಮತಗಳ್ಳತನದ ವಿರುದ್ಧ ಬಿಜೆಪಿ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆರಂಭವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಚಿವರು, ಶಾಸಕರು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು, ಲಕ್ಷಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.


