CrimeElection NewsKannada NewsKarnataka NewsPolitics

*ಮತಗಳ್ಳತನ ಪ್ರಕರಣ: ಬಿಜೆಪಿ ಮಾಜಿ ಶಾಸಕನ ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್‌ಶೀಟ್*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಪಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣದಲ್ಲಿ ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. 

2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದರು. ನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವಿಷಯವನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಪ್ರಸ್ತಾಪಿಸಿ ಆರೋಪ ಮಾಡಿದ್ದರು

ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಎಸ್‌ಐಟಿ ತಂಡ ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾಗಿದ್ದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಪಾತ್ರವಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

Home add -Advt

Related Articles

Back to top button