Election NewsKannada NewsKarnataka NewsNationalPolitics
*ಮತಗಳ್ಳತನ: ಹಲವು ರಾಜ್ಯಗಳ ಚುನಾವಣಾ ಆಯೋಗದ ವೆಬ್‌ಸೈಟ್ ಬಂದ್..?*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪ ಮಾಡಿದರು. ಈ ಕುರಿತು ದಾಖಲೆಗಳನ್ನು ಸಹ ಬಿಡುಗಡೆ ಮಾಡಿದರು. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತಗಳ್ಳತನ ವಿರುದ್ಧ ಬೃಹತ್ ಸಮಾವೇಶ ನಡೆಸಲಾಗಿದೆ. ಈ ಮಧ್ಯೆ ಹಲವು ರಾಜ್ಯಗಳ ಚುನಾವಣಾ ಆಯೋಗದ ವೆಬ್‌ಸೈಟ್ ಬಂದ್ ಆಗಿದೆ ಎಂದು ನೆಟ್ಟಿಗರು ಸೋಷಿಯಲ್ ಮಿಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ.
ಐದು ವಿಧಗಳಲ್ಲಿ ಮತ ಕಳ್ಳತನವಾಗಿದ್ದು, ಕರ್ನಾಟಕದ ಈ ದಾಖಲೆ ಬಿಜೆಪಿಯ ದೊಡ್ಡ ಕುತಂತ್ರಕ್ಕೆ ಸಾಕ್ಷಿಯಾಗಿದೆ. ‘2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಬಿಜೆಪಿಯು ಚುನಾವಣೆಗಳನ್ನು ಗೆಲ್ಲಲು ಚುನಾವಣಾ ಆಯೋಗ ಸಾಥ್ ನೀಡಿದೆ’ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುಡಗಿ ನಿನ್ನೆ ದಾಖಲೆ ಬಿಡುಗಡೆ ಮಾಡಿದರು.
ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡಿರುವ ಬೆನ್ನಲೆ ಹಲವು ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತಗೊಂಡಿದೆ ಎಂದು ಸುದ್ದಿಯಾಗುತ್ತಿದೆ.