ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ.
ವೋಟರ್ ಐಡಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಚುನಾವಣಾ ಆಯೋಗ ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಈ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರ್ಬಳಕೆ ಮಾಡಿಕೊಂಡಿದ್ದ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವೋಟರ್ ಐಡಿ ಪರಿಷ್ಕರಣೆಯಲ್ಲಿ ಚಿಲುಮೆ ಸಂಸ್ಥೆ ಅಕ್ರಮವೆಸಗಿದ್ದು, ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ಹಲಸೂರು ಗೇಟ್ ಠಾಣೆಯಲ್ಲಿ ದೂರು ನೀಡಿತ್ತು. ಇದೀಗ ದೂರಿನ ಅನ್ವಯ ಸಂಸ್ಥೆ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ನಾಪತ್ತೆಯಾಗಿದ್ದ ವೃದ್ಧ ಶವವಾಗಿ ಪತ್ತೆ; ಕಾಲ್ ಹಿಸ್ಟ್ರಿಯಲ್ಲಿ ಶಾಕಿಂಗ್ ವಿಚಾರ ಬಯಲು
https://pragati.taskdun.com/old-man-dead-body-foundbangaloreputtenahalli/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ