Latest

BJP ನಾಯಕರೊಂದಿಗೆ ಚಿಲುಮೆ ಸಂಸ್ಥೆ ಸಂಪರ್ಕ ಜಗಜ್ಜಾಹೀರು!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ಗಳ ರಕ್ಷಣೆಗೆ ನಿಂತಿರುವವರು ಯಾರು? ಚಿಲುಮೆಗೆ ಯಾರ ಒಲುಮೆ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಬರ್ತ್‌ಡೇ ಪಾರ್ಟಿಗೆ ಹೋಗಿದ್ದ ಕ್ಯಾಷ್‌ಲ್ಲೇ ಅಭಿವೃದ್ಧಿಯಾದ ಸಚಿವರೇ? ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚಿಲುಮೆ ಸಂಸ್ಥೆಗೆ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಂದೀಶ್ ರೆಡ್ಡಿ ಕಡೆಯಿಂದ ಹಣ ಸಂದಾಯವಾಗಿದೆ. ಹಾಗೂ ಸಂಸ್ಥೆಯ ಮುಖ್ಯಸ್ಥನೊಂದಿಗೆ ಅಶ್ವಥ್ ನಾರಾಯಣ ಅವರ ಸಂಪರ್ಕವಿದೆ. ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ “ಉಚಿತ ಸೇವೆ”ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ? ಎಂದು ಕೇಳಿದೆ.

ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ. ಸಿಎಂ ಬೊಮ್ಮಾಯಿ ಅವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಚಿಲುಮೆ ಕಚೇರಿಯಲ್ಲಿ ಸಚಿವರಿಗೆ ಸೇರಿದ ಚೆಕ್ ಪತ್ತೆ; ಆ ಸಚಿವರು ಯಾರು?

https://pragati.taskdun.com/voter-id-scamchilume-ngopolice-raid/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button