Belagavi NewsBelgaum NewsElection NewsKannada NewsKarnataka NewsLatest

*ಮತ ಚಲಾವಣೆ ಪ್ರತಿಯೊಬ್ಬರ ಪವಿತ್ರ ಕರ್ತವ್ಯ: ಸಂದೀಪ ಪಾಟೀಲ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನಮ್ಮ ಮತ, ನಮ್ಮ ಹಕ್ಕು” ಪ್ರಜಾಪ್ರಭುತ್ವದ ಮೂಲಮಂತ್ರವಾಗಿದ್ದು, ಪ್ರತಿಯೊಬ್ಬ ನಾಗರಿಕನ ಭವಿಷ್ಯವನ್ನು ರೂಪಿಸುವ ಶಕ್ತಿಯು ಮತ ಹೊಂದಿದೆ. ಮತದಾನವು ಕೇವಲ ಹಕ್ಕಲ್ಲ; ಬದಲಾಗಿ ದೇಶದ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಪವಿತ್ರ ಕರ್ತವ್ಯ ಕೂಡ ಆಗಿದೆ. ಪ್ರತಿ ಮತವು ನಿರ್ಣಾಯಕವಾಗಿದ್ದು, ಮತದಾರರು ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ತಿಳಿಸಿದರು.

ಭಾರತ ಚುನಾವಣಾ ಆಯೋಗ, ಕರ್ನಾಟಕ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ (ಜ.25) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ 16ನೇ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾನದ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಬಿಗ್ ಬಾಸ್ ನಂತಹ ರಿಯಾಲಿಟಿ ಶೋ-ಗಳಿಗೆ ಯಾವುದೇ ಹಣ, ಜಾತಿ ನೋಡದೆ ಮತ ಹಾಕುತ್ತಾರೆ. ಆದರೆ ನಮ್ಮ ಜೀವನದ ಮುಂದಿನ ಪೀಳಿಗೆಯ ವಿಚಾರ ಬಂದಾಗ ಯಾಕೆ ಜಾತಿ ಧರ್ಮ ಮೊರೆ ಹೋಗುತ್ತಾರೆ, ಅದರಿಂದ  ನೀವುಗಳು ಯೋಚನೆ ಮಾಡಿ ಮತ ಹಾಕಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಬೇಕು. ಆಯ್ಕೆಯಾದ ಜನಪ್ರತಿನಿಧಿಗಳನ್ನು ಧೈರ್ಯದಿಂದ ಪ್ರಶ್ನೆ ಮಾಡಬಹುದು ಎಂದರು.

ಮತವನ್ನು ಆಮಿಷಗಳಿಗೆ ಮಾರಿಕೊಳ್ಳದೆ. ಮತದಾನದ ಮೂಲಕ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕು.  ಮತದಾರರು ಜಾತಿ, ಧರ್ಮದ ಮೊರೆ ಹೋಗದೇ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಬೇಕು. ಪಾರದರ್ಶಕ ಮತ ಚಲಾಯಿಸುವ ಮೂಲಕ ನಿಮ್ಮ ಭವಿಷ್ಯ ನಿಮ್ಮ ಕೈಯಲಿದೆ ಎಂದು ಸಂದೀಪ ಪಾಟೀಲ ಯುವಕರಿಗೆ ಅರಿವು ಮೂಡಿಸಿದರು.

Home add -Advt

ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಭಾಷ ಸಂಕದ ಮಾತನಾಡಿ ಮತದಾನ ದಿನಾಚರಣೆ  ಕಾರ್ಯಕ್ರಮ ಇವತ್ತಿಗೆ ಮಾತ್ರ ಸೀಮಿತವಾಗಬಾರದು 18 ವರ್ಷ ವಯಸ್ಸಿನ ನಂತರ ಎಲ್ಲರಿಗೂ ತಿಳುವಳಿಕೆ ಬರುತ್ತದೆ ಆದ್ದರಿಂದ ಪ್ರತಿಯೊಬ್ಬರು ಮತ ಚಲಾಯಿಸಬೇಕು. ಒಳ್ಳೆಯ ನಾಯಕರನ್ನು ಆಯ್ಕೆ ಮಾಡಲು ನೀವು ಕಡ್ಡಾಯವಾಗಿ ಮತ ಚಲಾಯಿಸಿ ಸಂವಿಧಾನ ಪ್ರಜೆಗಳಿಗೆ ನೀಡಿರುವ ಹಕ್ಕುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.

ಮಹಾನಗರ ಪಾಲಿಕೆಗೆ ಉಪ ಆಯುಕ್ತ  ಉದಯಕುಮಾರ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿ, ಜನವರಿ 25 ರಂದು ಆಯೋಗ ಸ್ಥಾಪನೆಯಾಗಿರುವ ಕಾರಣ ಪ್ರತಿವರ್ಷ 25ರಂದು ರಾಷ್ಟ್ತೀಯ ಮತದಾರರ ದಿನಾಚರಣೆ ಹಾಗೂ

ಮತದಾನ ಜಾಗೃತಿ ದಿನ ಎಂದು ಆಚರಿಸಲಾಗುತ್ತಿದೆ

ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಎಲ್ಲ  ಯುವಕರು 18 ವರ್ಷಕ್ಕೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ತಪ್ಪದೇ ಸೇರಿಸಬೇಕು. ಈಗ ತಂತ್ರಜ್ಞಾನ ಬೆಳವಣಿಗೆ ಕಂಡ ನಂತರ ಆನ್ ಲೈನ್ ಮೂಲಕ ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸುವುದು ಸುಲಭವಾಗಿದೆ ಮಾಹಿತಿ ನೀಡಿದರು.

ಮತದಾನ ಪ್ರತಿಜ್ಞಾವಿಧಿ ಬೋಧನೆ

ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಚುನಾವಣಾ ಆಯೋಗದ ವತಿಯಿಂದ ಮತದಾನ ಜಾಗೃತಿ ಕುರಿತು ಕಲೆ, ಸಾಹಿತ್ಯದ ವಿಡಿಯೋ ಪ್ರದರ್ಶನ ಮಾಡಲಾಯಿತು.

ನಂತರ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಮತದಾನ ಜಾಗೃತಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ್ ನಾಯಕ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಹದೇವ ಕಾಂಬಳೆ, ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ, ಪ್ರಿಯಾಂಕ ವಿನಾಯಕ್ ಉಪಸ್ಥಿತರಿದ್ದರು. ವಿವಿಧ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಮತದಾರರ ಪ್ರತಿಜ್ಞಾ ವಿಧಿ

“ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ.”

ಮತದಾನ ಜಾಗೃತಿ ಜಾಥಾ

ಇದಕ್ಕೂ ಮುಂಚೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2026 ಪ್ರಯುಕ್ತ ಮತದಾನ ಕುರಿತು ವಿಶೇಷ ಅಭಿಯಾನಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರಾವಣ ನಾಯಕ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ ಹಾಜರಿದ್ದರು.

ಜಾಗೃತಿ ಜಾಥಾ ಚನ್ನಮ್ಮ ವೃತ್ತದಿಂದ ಕೊಲ್ಲಾಪುರ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ರಂಗ ಮಂದಿರದವರೆಗೆ ತಲುಪಿತು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ನಮ್ಮ ಮತ, ನಮ್ಮ ಹಕ್ಕು, ಕಡ್ಡಾಯ ಮತದಾನ, ನಿಮ್ಮ ಮತ ನಿಮ್ಮ ಭವಿಷ್ಯ, ರೂಪಾಯಿ ಪಡೆಯಬೇಡಿ ಮತ ಮರಬೇಡಿ ಎಂಬ ವಿವಿಧ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು.

Related Articles

Back to top button