Kannada NewsKarnataka NewsLatest

*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ*

ಪ್ರತಿಷ್ಠಿತ ವಿವಿಯಲ್ಲಿ ಪ್ರಾಧ್ಯಪಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುರ್ವಣಾವಕಾಶ.

Home add -Advt

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ.

ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಓದಿ, ಅರ್ಹತೆಯನ್ನು ಪರಿಶೀಲಿಸಿ, ನಿಗದಿತ ನಮೂನೆಯಲ್ಲಿ ಅಂಚೆ ಮೂಲಕ ಕಳುಹಿಸಿ.

ಈ ನೇಮಕಾತಿಯಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು, ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200 ರೂ.ರವರೆಗೆ ವೇತನ ನೀಡಲಾಗುತ್ತದೆ. ವಿಶ್ವವಿದ್ಯಾಲಯ ಮಟ್ಟದಲ್ಲಿ ಬೋಧನೆ, ಸಂಶೋಧನೆ ಮತ್ತು ಅಕಾಡೆಮಿಕ್ ಕಾರ್ಯಗಳಲ್ಲಿ ಭಾಗವಹಿಸಲು ಇದು ಉತ್ತಮ ವೇದಿಕೆಯಾಗಿದೆ.

ಸರಿಯಾದ ಮಾಹಿತಿಯೊಂದಿಗೆ ಅರ್ಜಿ ಭರ್ತಿ ಮಾಡಬೇಕು. ಅರ್ಜಿಯೊಂದಿಗೆ ಸ್ವಯಂ-ದೃಢೀಕರಿಸಿದ ದಾಖಲೆಗಳು, ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರಗಳು, ಇತ್ತೀಚಿನ ಛಾಯಾಚಿತ್ರ ಹಾಗೂ ಅನುಭವ ದಾಖಲೆಗಳನ್ನು ಸೇರಿಸಬೇಕು. ಅನ್ವಯಿಸಿದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಪೂರ್ಣಗೊಂಡ ಅರ್ಜಿಯನ್ನು “ರಿಜಿಸ್ಟ್ರಾರ್, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ” ಈ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.


Related Articles

Back to top button