ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬದಲಾಗುತ್ತಿರುವ ಸಂದರ್ಭದಲ್ಲಿ ಇಂದಿನ ವಿದ್ಯಾರ್ಥಿಗಳಲ್ಲಿ ಸಂವಿಧಾನ ರಚನೆ ಇತಿಹಾಸ, ಅದರ ಅಂಶಗಳು ಹಾಗೂ ಸಂವಿಧಾನ ನಾಗರೀಕರಿಗೆ ನೀಡುವ ಹಕ್ಕುಗಳ ಬಗ್ಗೆ ತಿಳುವಳಿಕೆ ಬಹಳ ಮುಖ್ಯವಾಗಿದೆ ಎಂದು ಡಾ.ಎ.ಬಿ.ಕಾಲಕುಂದ್ರಿಕರ ಹೇಳಿದರು.
ಸಂವಿಧಾನ ದಿನ ಆಚರಣೆ ಹಿನ್ನೆಲೆಯಲ್ಲಿ ವಿಟಿಯುನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮಕ್ಕೆ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರರು ಹಾಗೂ ವಿ ತಾ ವಿಯ ನ್ಯಾಕ ಘಟಕದ ಮಾರ್ಗದರ್ಶಕರಾದ ಡಾ. ಎ. ಬಿ. ಕಾಲಕುಂದ್ರಿಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಎ.ಬಿ.ಕಾಲಕುಂದ್ರಿಕರ ಅವರು ಮಾತನಾಡಿ ಈ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಶ್ರೇಷ್ಠ ಸ್ಥಾನದಲ್ಲಿದೆ ಹಾಗೂ ಇದುವೇ ಎಲ್ಲದರ ಮೂಲ ಎಂದು ಹೇಳಿದರು.
ಇದು ಜಗತ್ತಿನ ಅತೀ ದೊಡ್ಡ ಸಂವಿಧಾನವಾಗಿದ್ದು ಕೇವಲ ಸುಪ್ರೀಂ ಕೋರ್ಟ್ ಮಾತ್ರ ಇದರ ವಿಮರ್ಶೆ ಮಾಡಬಹುದು ಹಾಗೂ ಸರ್ಕಾರ ಸಂವಿಧಾನದ ಅಡಿಯಲ್ಲಿ ಕೆಲಸಮಾಡುತ್ತದೆ ಅಂತ ಹೇಳಿದರು. ಇದು ಕೇವಲ ಸಾಮಾಜಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಹೇಳದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಹಣಕಾಸಿನ ವ್ಯವಹಾರದ ವ್ಯವಸ್ಥೆಯನ್ನು ವ್ಯಾಖ್ಯಾನಿಸುತ್ತದೆ ಎಂದು ಹೇಳಿದರು.
ಬದಲಾಗುತ್ತಿರುವ ಸಂದರ್ಭದಲ್ಲಿ ಇಂದಿನ ವಿದ್ಯಾರ್ಥಿಗಳಲ್ಲಿ ಸಂವಿಧಾನ ರಚನೆ ಇತಿಹಾಸ, ಅದರ ಅಂಶಗಳು ಹಾಗೂ ಸಂವಿಧಾನ ನಾಗರೀಕರಿಗೆ ನೀಡುವ ಹಕ್ಕುಗಳ ಬಗ್ಗೆ ತಿಳುವಳಿಕೆ ಬಹಳ ಮುಖ್ಯವಾಗಿದೆ ಆದ್ದರಿಂದಲೇ ಇವತ್ತು ಎಲ್ಲ ರೀತಿಯ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು ಇದರ ಬಗೆಗಿನ ಅರಿವು ರಾಷ್ಟ್ರಭಕ್ತಿಯನ್ನು ಇಮ್ಮಡಿಗೊಳಿಸಿ ರಾಷ್ಟ್ರಕ್ಕಾಗಿ ಕಾರ್ಯ ಪ್ರವೃತ್ತರಾಗಲು ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.
ಇದು ನಾಗರೀಕರಿಗೆ ಸಮಾಜಿಕವಾಗಿ ಸ್ವಾತಂತ್ರ್ಯವನ್ನು ಕೊಡುವುದರ ಜೊತೆಗೆ ಒಬ್ಬರು ಮತ್ತೊಬ್ಬರ ಸ್ವಾತಂತ್ರ್ಯದಲ್ಲಿ ಹಸ್ತಕ್ಷೇಪ ಮಾಡದಂತೆಯೂ ನೋಡಿಕೊಳ್ಳುತ್ತದೆ ಎಂದು ಹೇಳುತ್ತಾ ಇಂತಹ ಶ್ರೇಷ್ಠ ರಾಷ್ಟ್ರಗ್ರಂಥವನ್ನು ನೀಡಿದ ಮಹಾನ ವ್ಯಕ್ತಿತ್ವ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಪಡೆದಿದ್ದು ನಮೇಲ್ಲರ ಪುಣ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಮಾನ್ಯ ಕುಲಪತಿಗಳಾದ ಪ್ರೊ. ಕರಿಸಿದ್ದಪ್ಪ ಅವರು ಮಾತನಾಡಿ ಸಂವಿಧಾನ ಎನೂ? ಹೇಗೆ ರಚನೆ ಆಯ್ತು? ಅದು ನಮಗೆ ಏನನ್ನು ಕೊಡುತ್ತೆ ಹಾಗೂ ನಾಗರೀಕರಾದ ನಾವು ಸಂವಿಧಾನಕ್ಕನುಗುಣವಾಗಿ ರಾಷ್ಟ್ರಕ್ಕಾಗಿ ಎನನ್ನು ಕೊಡಬೇಕು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಈ ಎಲ್ಲ ಅಂಶಗಳು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯಲು ಇಂತಹ ಕಾರ್ಯಕ್ರಮಗಳು ಅವಶ್ಯ ಎಂದು ಹೇಳಿದರು. ನಾವು ರಾಷ್ಟ್ರದ ಶ್ರೇಷ್ಠ ಪ್ರಜೆಗಳಾಗಲು ಸಂವಿಧಾನ ನೀಡಿದ ಹಕ್ಕು ಮತ್ತು ಜವಾಬ್ದಾರಿಗಳನ್ನು ಅರಿತುಕೊಂಡು ನಾವೇಲ್ಲ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ.ಆನಂದ ದೇಶಪಾಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿಗಳಾದ ಶ್ರೀಮತಿ ಎಂ. ಎ. ಸಪ್ನಾ, ಎಲ್ಲ ವಿಭಾಗದ ಮುಖ್ಯಸ್ಥರು, ವಿಶೇಷಾಧಿಕಾರಿಗಳು, ಸಿಬ್ಬಂದಿ ವರ್ಗ ಹಾಜರಿದ್ದರು. ಎನ್ ಎಸ ಎಸ ಸಂಯೋಜನಾಧಿಕಾರಿ ಪ್ರೊ. ಅಪ್ಪಾಸಾಬ ಎಲ ವಿ ಅವರು ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ