Karnataka NewsLatest

*ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಸಂಚಾರ : ನಾಲ್ವರು ಅಪ್ರಾಪ್ತರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಸಂಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈದ್ ಮಿಲಾದ್ ಹಿನ್ನೆಲೆ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಮುಸ್ಲಿಂ ಯುವಕರು ಕೆ.ಎಂ.ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇನ್ನು ನಗರ ಪೊಲೀಸ್ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕ್‌ನಲ್ಲಿ ಸಂಚಾರ ನಡೆಸಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button