ಪ್ರಗತಿವಾಹಿನಿ ಸುದ್ದಿ; ಲಕ್ನೌ: ಗೋಡೆ ಕುಸಿದುಬಿದ್ದ ಪರಿಣಾಮ 12 ಜನರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಈ ಸಾವು ಸಂಭವಿಸಿದೆ.
ಲಖ್ನೌದ ದಿಲ್ ಕುಶಾ ಎಂಬ ಪ್ರದೇಶದಲ್ಲಿ ಗೋಡೆ ಕುಸಿದುಬಿದ್ದ ಪರಿಣಾಮ 9 ಜನರು ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಇದೇ ವೇಳೆ ಉನ್ನಾವೋದಲ್ಲಿಯೂ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ.
ಘಾನಾಶಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಣ್ಣಿನಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ತಲಾ 4 ಲಕ್ಷ ಪರಿಹಾರ ಘೋಷಿಸಿದೆ.
https://pragati.taskdun.com/politics/kpcc-state-presidentd-k-shivakumarcontinue/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ