National

*ವಕ್ಫ್ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ನೀಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ವಕ್ಫ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೊಸ ತಿದ್ದುಪಡಿ ಕಾಯ್ದೆಗೆ ಸಂಪೂರ್ಣ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಆದರೆ ಮುಂದಿನ ವಿಚಾರಣೆವರೆಗೂ ಯಾವುದೇ ನೇಮಕಾತಿ ಮಾಡುವಂತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಒಂದು ವಾರದಲ್ಲಿ ಭರವಸೆಗಳ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಮಧ್ಯಂತರ ಆದೇಶ ನೀಡಿದೆ.

ಕೇಂದ್ರ ಸರ್ಕಾರ ಒಂದು ವಾರದೊಳಗಾಗಿ ಉತ್ತರ ನೀಡಬೇಕು. ದಾಖಲೆಗಳನ್ನು ಸಲ್ಲಿಸಬೇಕು. ಮುಂದಿನ ವಿಚಾರಣೆ ವೇಳೆ 5 ಅರ್ಜಿದಾರರ ವಾದ ಆಲಿಸಲಾಗುವುದು. 5 ಐರ್ಜಿದಾರರು ಯಾರೆಂಬುದನ್ನು ನೀವೇ ಆಯ್ಕೆ ಮಾಡಿ ಎಂದು ತಿಳಿಸಿರುವ ಸುಪ್ರೀಮ್ ಕೋರ್ಟ್, ಮೇ 5ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

Home add -Advt

Related Articles

Back to top button