EducationPolitics

*ವಖ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು*

ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.


ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

Home add -Advt


ಮಹಿಳಾ ಕಾಲೇಜು ಸ್ಥಾಪನೆಯಿಂದ ಸಮುದಾಯಕ್ಕೆ ಉನ್ನತ ಶಿಕ್ಷಣ ಇದರ ಜತೆಗೆ, ಕರ್ನಾಟಕ ಗೃಹ ಮಂಡಳಿ ವತಿಯಿಂದ 50:50 ಅನುಪಾತದಲ್ಲಿ ಕಲಬುರಗಿಯ ತಾವರೆಗೆರೆ ಯಲ್ಲಿ 80ಕೋಟಿ ರೂ. ವೆಚ್ಚದಲ್ಲಿ ಒಟ್ಟು 286.28 ಎಕರೆ ಪೈಕಿ ಮೊದಲ ಹಂತದಲ್ಲಿ 87.34 ಎಕರೆ ಜಮೀನಿನಲ್ಲಿ ಹೊಸ ಬಡಾವಣೆ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button