ಪ್ರಗತಿವಾಹಿನಿ ಸುದ್ದಿ: ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಆದೇಶ ನೀಡಿದರೂ ಕೂಡ ಕೆಲ ಅಧಿಕಾರಿಗಳು ನೆನಪಿನ ಪತ್ರ ಹೆಸರಲ್ಲಿ ನೊಟೀಸ್ ನೀಡಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಈ ಕೆಳಕಂಡಂತೆ ಸೂಚನೆಯನ್ನು ನೀಡಿದ್ದಾರೆ.
- ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮುಟೇಷನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು; ಕೂಡಲೇ
- ಈ ಕುರಿತು ನೀಡಲಾದ ಎಲ್ಲಾ ನೋಟೀಸುಗಳನ್ನು ಹಿಂಪಡೆಯುವುದು.
- ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರುಗಳ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ.
ಮುಖ್ಯಮಂತ್ರಿಗಳ ಸೂಚನೆಯನ್ವಯ ಸರ್ಕಾರದ ಪತ್ರ ಸಂಖ್ಯೆ.ಕಂಇ 99 ಟಿಆರ್ ಎಂ 2024, ದಿನಾಂಕ:15.04.2024, 23.04.2024 ಹಾಗೂ ದಿನಾಂಕ:07.11.2024ರ ನೆನಪೋಲೆ-2 ಇವುಗಳನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ.
ಮುಖ್ಯಮಂತ್ರಿಗಳ ಆದೇಶವಿದ್ದಾಗ್ಯೂ ಮೇಲಧಿಕಾರಿಗಳ ಅನುಮತಿ / ಅನುಮೋದನೆ ಇಲ್ಲದೆ ದಿನಾಂಕ:07.11.2024ರ ನೆನಪೋಲೆ-2ನ್ನು ಹೊರಡಿಸಿದ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ