Kannada NewsLatestNational

*ಯುದ್ಧದ ಎಫೆಕ್ಟ್: ವಿಮಾನ ಟಿಕೆಟ್ ದರದಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಇಸ್ರೇಲ್-ಅಮೆರಿಕಾ-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ವಿಮಾನ ಪ್ರಯಾಣ ದರ ಮತ್ತಷ್ಟು ದುಬಾರಿಯಾಗಿದೆ.

ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆಯಾಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ.

ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425 ರೂ. ಇಂಧನ ಶುಲ್ಕವನ್ನು ವಿಧಿಸುತ್ತಿದೆ. ಮಧ್ಯಪ್ರಾಚ್ಯಕ್ಕೆ 900 ರೂ., ಆಗ್ನೇಯ ಏಷ್ಯಾ, ಚೀನಾ, ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದಂತಹ ಪ್ರದೇಶಗಳಿಗೆ 1,800 ರೂ. ಮತ್ತು ಯುರೋಪ್‌ಗೆ ತೆರಳುವ ವಿಮಾನಗಳಿಗೆ 2,300 ರೂ. ಶುಲ್ಕ ನಿಗದಿಪಡಿಸಲಾಗಿದೆ.

Home add -Advt

ವಿಮಾನ ದರಗಳ ಈ ಹಠಾತ್ ಏರಿಕೆಗೆ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.


Related Articles

Back to top button