Latest

ಬಂದ್ ಕರೆ ಕೊಟ್ಟವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕೊಟ್ಟ ಖಡಕ್ ಎಚ್ಚರಿಕೆ


 

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ನಾವು ನಿಮ್ಮ ಭಾವನೆಗಳಿಗೆ ಸ್ಪಂದಿಸಿದ್ದೇವೆ. ಹಾಗಾಗಿ ಬಂದ್ ಕರೆ ಬೇಡ ಎಂದು ವಿನಂತಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಅವರ ವಿರುದ್ಧ ಕ್ರಮವನ್ನು ಆ ಸಂದರ್ಭದಲ್ಲೇ ಅಲ್ಲೇ ತೀರ್ಮಾನಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಂದ್ ಕರೆ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಮಹಾರಾಷ್ಟ್ರ ಏಕಾಕರಣ ಸಮಿತಿ ನಿಷೇಧಿಸಬೇಕೆನ್ನುವ ಬೇಡಿಕೆ ಮುಂದಿಟ್ಟು ಕೆಲವು ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಕರೆ ನೀಡಿವೆ. ಎಂಇಎಸ್ ನಿಷೇಧ ಸಂಬಂಧ ನಾವು ಈಗಾಗಲೆ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ಹಲವು ವಿಚಾರಗಳಲ್ಲಿ 24 ಗಂಟೆಯೊಳಗಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಕರೆಯ ಹೊರತಾಗಿಯೂ ಹೋರಾಟಕ್ಕೆ ಹಲವು ಮಾರ್ಗಗಳಿವೆ. ಈಗಾಗಲೆ ಜನರು ಕೋವಿಡ್ ನಿಂದಾಗಿ ಸಂಕಷ್ಟದಲ್ಲಿದ್ದಾರೆ. ಮತ್ತು ಬಂದ್ ನಂತಹ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಇಷ್ಟಾಗ್ಯೂ ಬಲವಂತವಾಗಿ ಬಂದ್ ಮಾಡಲು ಮುಂದಾದರೆ ಅವರ ವಿರುದ್ಧ ಆ ಸಂದರ್ಭದಲ್ಲಿ ಅಲ್ಲ ಕ್ರಮದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

ಕರ್ನಾಟಕ ಬಂದ್ ಸಂಬಂಧ ಈಗಾಗಲೆ ಕನ್ನಡ ಸಂಘಟನೆಗಳಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿವೆ. ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ಇಲ್ಲ ಎಂದು ನೇರವಾಗಿ ಘೋಷಿಸಿದರೆ, ಕೆಲವು ಸಂಘಟನೆಗಳು ಕೇವಲ ನೈತಿಕ ಬೆಂಬಲ ಎಂದಿವೆ.

ಬೆಳಗಾವಿಯಲ್ಲಿ ಬಹುತೇಕ ಕನ್ನಡ ಸಂಘಟನೆಗಳು ಬಂದ್ ಕರೆಗೆ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ವಾಟಾಳ ನಾಗರಾಜ್ ಬಂದ್ ಮಾಡಿಯೇ ತೀರುತ್ತೇವೆ ಎಂದಿದ್ದಾರೆ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button