Belagavi NewsBelgaum NewsKarnataka News

*ಅಧಿವೇಶನದಲ್ಲಿ ಎಂಇಎಸ್ ಬಾಲ ಬಿಚ್ಚಿದರೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮೊಂಡುತನ ಪ್ರದರ್ಶಿಸಲು ಮುಂದಾಗುತ್ತದೆ. ಅದೇ ರೀತಿ ಬರುವ ಡಿ.9 ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಅಡ್ಡಿಪಡಿಸಲು ಎಂಇಎಸ್ ಮಹಾಮೇಳಾವ ನಡೆಸಲು ಮುಂದಾಗಿದೆ. ಅದಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಆರಂಭವಾದ ಪ್ರತಿಭಟನೆ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಘೋಷಣೆ ಕೂಗಿದ ಪ್ರತಿಭಟನಾಕಾರರು ಡಿಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.‌ 

ಎಂಇಎಸ್ ಈಗಾಗಲೇ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಎಂಇಎಸ್ ಪುಂಡಾಟಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ಮಹಾಮೇಳಾವ ನಡೆಸಲು ಅವಕಾಶ ಕೊಡಬಾರದು.  ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ಸಂಚರಿಸುವ ಬಸ್ ಗಳಿಗೆ ಬೆಂಕಿ ಹಚ್ಚುವ ಎಚ್ಚರಿಕೆ ನೀಡುತ್ತಿರುವ ಪುಂಡರಿಗೆ ಕನ್ನಡಿಗರು ತಕ್ಕ ಪಾಠ ಕಲಿಸುತ್ತೇವೆ. ಕೇವಲ ಕರ್ನಾಟಕದ ಬಸ್ ಮಾತ್ರ ನಿಮ್ಮಲ್ಲಿ ಬರಲ್ಲ, ಮಹಾರಾಷ್ಟ್ರದ ಬಸ್ ಕರ್ನಾಟಕಕ್ಕೂ ಬರತ್ತೆ ಎಚ್ಚರಿಕೆಯಿಂದ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button