Kannada NewsKarnataka NewsLatest
ಜನರಿಗೆ ಬೆಳಗಾವಿ ಪೊಲೀಸರ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದಲ್ಲಿ ತೀವ್ರ ವಿವಾದ ಹುಟ್ಟಿಸಿರುವ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಜನರಿಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರ ಘಟಕದ ವ್ಯಾಪ್ತಿಯಲ್ಲಿ ಯಾರಾದರೂ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸಪ್, ಫೇಸ್‌ಬುಕ್, ಇನ್ಸ್ಟಾ ಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಹೇಳಕೆಗಳನ್ನು ಹಾಗೂ ಪೋಸ್ಟರ್‌ಗಳನ್ನು ಹಾಕಿದಲ್ಲಿ ಮತ್ತು ಇದಕ್ಕೆ ಸಂಬಂಧಪಟ್ಟಂತೆ ಯಾರಾದರು ಗುಂಪುಗಾರಿಕೆ, ಗಲಾಟೆ, ದೊಂಬಿ ಇತ್ಯಾದಿಗಳನ್ನು ಮಾಡಿದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ನಿರ್ಧಾಕ್ಷಿಣ್ಯವಾಗಿ ಕಾನೂನು ರಿತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಈ ರೀತಿ ಮಾಡುವವರ ಬಗ್ಗೆ ಮಾಹಿತಿ ಇದ್ದಲ್ಲಿ ಕಾನೂನು ಕೈಗೆತ್ತಿಕೊಳ್ಳದೇ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದೂ ಸೂಚಿಸಿದ್ದಾರೆ.




