
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರಿ ಮಳೆಯಾಗುತ್ತಿರುವುದರಿಂದ ಘಟಪ್ರಭಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ.
ಹಾಗಾಗಿ ಘಟಪ್ರಭಾ ಮತ್ತು ಹಿರಣ್ಯಕಶಿ ನದಿ ತೀರದ ನಿವಾಸಿಗಳಿಗೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಗೆ ಬಿಡುವ ಸಾಧ್ಯತೆ ಇದೆ. ಆಸ್ತಿ ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ