
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ಹಾಲು, ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಜೀವ ಜಲವೂ ದುಬಾರಿಯಾಗಲಿದೆ. ಹೌದು. ನೀರಿನ ದರ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದೇ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕರುನಾಡಿನ ಜನತೆಗೆ ದಿನಕ್ಕೊಂದು ದರ ಏರಿಕೆಯ ಬರೆ! ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅದಕ್ಷ ಆಡಳಿತದಲ್ಲಿ ಜನಸಾಮಾನ್ಯರು ಬೆಲೆಯೇರಿಕೆಯಿಂದ ತತ್ತರಿಸುತ್ತಿದ್ದಾರೆ. ಈಗ ಜನರ ದಿನಬಳಕೆಯ ನೀರಿನ ದರವನ್ನೂ ಏರಿಸಲು ಹೊರಟಿದೆ ʼಕೈʼ ಎಂದು ಕಿಡಿಕಾರಿದೆ.
ರಾಜ್ಯದ ಖಜಾನೆಯನ್ನೆಲ್ಲಾ ಲೂಟಿ ಹೊಡೆದು ಈಗ ಖರ್ಚಿನ ಹೊರೆಯನ್ನು ಜನರ ಮೇಲೆ ಹೊರಿಸಲು ʼಸಿದ್ದʼವಾಗಿದೆ ಸರ್ಕಾರ ಎಂದು ರಾಜ್ಯ ಬಿಜೆಪಿ ಘಟಕ ಟೀಕಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ