
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿಯ ಈರಪ್ಪ (ಈರಣ್ಣ) ಕಡಾಡಿ ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಈ ಕುರಿತು ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅವರಿಂದ ಈರಣ್ಣ ಕಡಾಡಿ ಪ್ರಮಾಣಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೆಎಂಎಫ್ ರಾಜ್ಯಾಧ್ಯಕ್ಷ, ಮಾಜಿ ಸಚಿವರು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಶಶಿಕಾಂತ ನಾಯಿಕ ಹಾಗೂ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.