
ಪ್ರಗತಿವಾಹಿನಿ ಸುದ್ದಿ, ಗೋಕಾಕ : ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಮಂಗಳವಾರ ಸಂಜೆಯಿಂದ ಘಟಪ್ರಭಾ ನದಿ ಮತ್ತು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಹಿಡಕಲ್ ಜಲಾಶಯದಿಂದ ಜಿಎಲ್‌ಬಿಸಿಗೆ ೧.೫೦ ಟಿಎಂಸಿ, ಜಿಆರ್‌ಬಿಸಿಗೆ ೧.೫೦ ಟಿಎಂಸಿ, ಘಟಪ್ರಭಾ ನದಿಗೆ ೧.೦೦ ಟಿಎಂಸಿ ಮತ್ತು ಸಿಬಿಸಿಗೆ ೦.೫೦ ಟಿಎಂಸಿ ನೀರನ್ನು ಜೂ.೧೬ ರಿಂದ ೨೩ ರವರೆಗೆ ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ ೬.೭೫ ಟಿಎಂಸಿ ನೀರು ಸಂಗ್ರಹವಿದ್ದು, ನಿನ್ನೆ ಸಂಜೆಯಿಂದ ೪.೫೦ ಟಿಎಂಸಿ ನೀರನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನದಿ ಮತ್ತು ಕಾಲುವೆಗಳಿಗೆ ಹರಿಸಲಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ