Latest

*ನೀರು ಖಾಲಿಯಾಗುತ್ತಿದೆ*: *ಬೆಳಗಾವಿ ಜನರಿಗೆ ದಂಡದ ಎಚ್ಚರಿಕೆ*

ಜಲಾಶಯಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಮಿತವಾಗಿ ನೀರು ಬಳಸಿ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ ಪ್ರಮಾಣ ದಿನೇ ದಿನೇ ಇಳಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಈಗಿನಿಂದಲೇ ಮಿತವಾಗಿ ನೀರನ್ನು ಬಳಸಬೇಕು ಎಂದು ಕೆಯುಐಡಿಎಫ್‌ಸಿ-ಕೆಯುಡಬ್ಲುಎಸ್‌ಎಂಪಿ ಮನವಿ ಮಾಡಿದೆ.

ಅಗತ್ಯಕ್ಕೆ ಅನುಗುಣವಾಗಿ ನೀರನ್ನು ನ್ಯಾಯೋಚಿತವಾಗಿ ಬಳಕೆ ಮಾಡುವ ಜವಾಬ್ದಾರಿ ಎಲ್ಲ ನಾಗರಿಕರದ್ದಾಗಿದೆ. ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ ಪ್ರಮಾಣ ದಿನೇ ದಿನೇ ಇಳಿಕೆಯಾಗುತ್ತಿರುವುದರಿಂದ ಬೇಸಿಗೆ ಕಾಲದಲ್ಲಿ ನೀರನ್ನು ಬೇಡಿಕೆಗೆ ಅನುಗುಣವಾಗಿ ಪೂರೈಸಲು ತೊಂದರೆಯಾಗಬಹುದಾಗಿದೆ ಎಂದು ಎಚ್ಚರಿಕೆ ನೀಡಿದೆ.

ಸಾರ್ವಜನಿಕರು ಈಗಿನಿಂದಲೇ ಮಿತವಾಗಿ ನೀರನ್ನು ಬಳಸಿ, ನೀರನ್ನು ಪೋಲು ಮಾಡದಿರಿ. ಹಾಗೂ ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಸಬಾರದು. ಅಕಸ್ಮಾತ್ ಒಂದು ವೇಳೆ ಮೇಲೆ ಸೂಚಿಸಿದವುಗಳಿಗೆ ನೀರನ್ನು ಬಳಸಿದ್ದು ಕಂಡು ಬಂದರೆ ೫೦೦/- ರೂ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದ್ದಲ್ಲಿ ರೂ. ೫೦೦೦/- ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದೂ ಎಚ್ಚರಿಸಲಾಗಿದೆ.

Home add -Advt

ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಟೋಲ್ ಫ್ರಿ ಸಂಖ್ಯೆ ೧೮೦೦ ೪೨೫ ೫೬೫೬ ಗೆ ತಿಳಿಸಬಹುದಾಗಿದೆ.
ಬರುವ ಬೇಸಿಗೆಯನ್ನು ಎದುರಿಸಲು ಮಹಾನಗರ ಪಾಲಿಕೆಗೆ ಸಹಕರಿಸಿ ಎಂದು ಮಹಾನಗರ ಪಾಲಿಕೆಯ ಪರವಾಗಿ ಕೆಯುಐಡಿಎಫ್‌ಸಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button