ನವಿಲು ತಿರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ
ಪ್ರಗತಿವಾಹಿನಿ ಸುದ್ದಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ನವಿಲು ತಿರ್ಥ ಜಲಾಶಯದಿಂದ ಮಲಫ್ರಭಾ ನದಿಗೆ 5,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸೇತುಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನದಿ ನೀರು ಹರಿಯುತ್ತಿದ್ದರೂ ಯುವಕರು ಹುಚ್ಚಾಟ ಮೆರೆಯುತ್ತಿದ್ದಾರೆ.
ರಾಮದುರ್ಗ ಪಟ್ಟಣದ ಬಳಿ ನದಿ ತುಂಬಿ ಹರಿಯುತ್ತಿದ್ದು, ಹಳೆ ಸೇತುವೆ ಮುಳುಗಡೆ ಆಗಿದೆ. ಆದರೆ ಅದೆ ಸೇತುವೆ ಮೇಲೆ ಯುವಕರು ಹುಚ್ಚಾಟ ಮೆರೆಯುತ್ತಿದ್ದಾರೆ. ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತಟದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಭದ್ರತೆಗೆ ನೀಯೋಜನೆ ಮಾಡಿಲ್ಲ. ಕೇವಲ ಬ್ಯಾರಿಗೇಡ್ ಹಾಕಿ ಪೊಲೀಸರು ಸುಮ್ಮನಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ