Karnataka NewsLatestPolitics

*ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಇಡಿ ಅಧಿಕಾರಿಗಳು ವಿರೇಂದ್ರ ಪಪ್ಪಿ ಮನೆ ಹಾಗೂ ಅವರ ಸಹೋದರರ ಮನೆ ಮೇಲೂ ದಾಳಿ ನಡೆಸಿದ್ದರು. ಈ ವೇಳೆ ಅಸ್ಸಾಂ ನಲ್ಲಿ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದರು. ಸದ್ಯ ವೀರೇಂದ್ರ ಪಪ್ಪಿ ಇಡಿ ಕಸ್ಟಡಿಯಲ್ಲಿದ್ದಾರೆ.

Home add -Advt

ಈ ನಡುವೆ ಇಂದು ಮತ್ತೆ ಚಿತ್ರದುರ್ಗದ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮತ್ತೊಂದೆಡೆ ವೀರೇಂದ್ರ ಪಪ್ಪಿ ಪತ್ನಿ ಚೈತ್ರಾ, ತನ್ನ ಪತಿಯನ್ನು ಬಂಧಿಸಿರುವ ಇಡಿ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಕಾರಣವನ್ನೂ ತಿಳಿಸದೇ ಇಡಿ ತನ್ನ ಪತಿಯನ್ನು ಬಂಧಿಸಿದ್ದು, ತಕ್ಷಣ ಅವರನ್ನು ಬಿಡುಗಡೆ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ.

Related Articles

Back to top button