
10 ಸಾವಿರ ಕ್ಯುಸೆಕ್ ನೀರು ಬಡುಗಡೆ, 15 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿ, ಖಾನಾಪುರ/ ಮುನವಳ್ಳಿ – ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಲಪ್ರಭಾ ಆಣೆಕಟ್ಟೆಯಿಂದ 10,000 ಕ್ಯೂಸೆಕ್ಸ್ ನೀರು ಹೊರಬಿಡಲಾಗಿದೆ.
ನೀರಿನ ಒಳಹರಿವು ಹೆಚ್ಚಿರುವುದರಿಂದ ಯಾವುದೇ ಕ್ಷಣದಲ್ಲಿ 15 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುವ ಸಾಧ್ಯತೆ ಇದ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ನದಿ ತೀರದ ಜನರು ತಕ್ಷಣ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ತಿಳಿಸಿದ್ದಾರೆ.
ಮಲಪ್ರಭಾ ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ಮುನವಳ್ಳಿ ಹತ್ತಿರದ ಹಳೆಯ ಸೇತುವೆ ಮುಳುಗಡೆಯಾಗಿದೆ. ನದಿ ತೀರದಲ್ಲಿರುವ ಮುನವಳ್ಳಿ ಪಟ್ಟಣಕ್ಕೆ ಹಳೆಯ ಸೇತುವೆ ಸಂಪರ್ಕ ಕಡಿತಗೊಂಡಿದ್ದು, ಹೊಸ ಸೇತುವೆ ಮುಖಾಂತರ ಮಾತ್ರ ಸಂಚಾರವಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ