Latest

*ಜಲಸಂಪನ್ಮೂಲ ಇಲಾಖೆಯಲ್ಲಿ 2326 ಕೋಟಿ ಅಕ್ರಮ; ಕಾಂಗ್ರೆಸ್ ನಿಂದ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಟೆಂಡರ್ ಹಗರಣ ನಡೆದಿದ್ದು, ಜಲಸಂಪನ್ಮೂನ ಇಲಾಖೆಯ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ 2326 ಕೋಟಿ ಹಗರಣ ನಡೆದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಅಲ್ಲದೇ ಇಲಾಖೆಯಲ್ಲಿನ 2326 ಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತಕ್ಕೆ ಲಿಖಿತ ದೂರು ನೀಡಿರುವ ಕಾಂಗ್ರೆಸ್, ಈ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

Related Articles

Back to top button