Latest

*ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೊನೆಗೂ ಸಿಕ್ತು ಅವಕಾಶ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಈಬಾರಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ್ನಕ್ಕೆ ಕೊನೇ ಕ್ಷಣದಲ್ಲಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿದ್ದ ಸಮಿತಿ ಇದೀಗ ರಾಜ್ಯದ ಒತ್ತಡಕ್ಕೆ ಮಣಿದು ಸ್ತಬ್ಧಚಿತ್ರ ಆಯ್ಕೆ ಮಾಡುವ ಮೂಲಕ ಅನುಮತಿ ನೀಡಿದೆ.

ಕಳೆದ 13 ವರ್ಷಗಳಿಂದ ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಥಸಂಚಲನದಲ್ಲಿ ಭಾಗವಹಿಸುತ್ತಿತ್ತು. ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಸಮಿತಿ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕರ್ನಾಟಕ ಹಾಗೂ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹಲವರು ಕಿಡಿಕಾರಿದ್ದರು.

Home add -Advt

ಇದಿಗ ಅಂತಿಮವಾಗಿ ಸ್ತಬ್ಧಚಿತ್ರ ಆಯ್ಕೆ ಸಮಿತಿ ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ 14ನೇ ಬಾರಿಗೆ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಕರ್ತವ್ಯ ಪಥ್ ನಲ್ಲಿ ಭಾಗವಹಿಸಲಿದೆ.

*ದೇಶದ ಭವಿಷ್ಯದ ಬಗ್ಗೆ ಮೂಡಿರುವ ವಿಶ್ವಾಸ ಇಂದು ವ್ಯಕ್ತವಾಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ*

https://pragati.taskdun.com/hubli-dharawadanational-youth-festivalpm-modiprahlad-joshi/

 

Related Articles

Back to top button