Kannada NewsKarnataka NewsLatest

*ಈ ದಿನಾಂಕದೊಳಗೆ ಟ್ಯಾಂಕರ್ ನೋಂದಣಿಯಾಗದಿದ್ದರೆ ಕಾನೂನು ಕ್ರಮ*

ಡಾ.ವಿ.ರಾಮ್‍ಪ್ರಸಾತ್ ಮನೋಹರ್ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ;ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.


ಈ 1530 ಟ್ಯಾಂಕರ್‌ಗಳಿಂದ ನಿತ್ಯ 10 ಎಂಎಲ್‍ಡಿ ನೀರನ್ನು ಒಂದೇ ಬಾರಿಗೆ ಸರಬರಾಜು ಮಾಡಬಹುದು. ನೋಂದಣಿಯಾದ ಟ್ಯಾಂಕರ್ ಗಳಿಗೆ ಸ್ಟಿಕ್ಕರ್ ಅಳವಡಿಸಲಾಗುವುದು; ಆ ಟ್ಯಾಂಕರ್ ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿರುವ ದೂರುಗಳು ಕೇಳಿಬಂದಲ್ಲಿ ಕ್ರಮಕೈಗೊಳ್ಳಲಾಗುವುದು. 419 ಜನರು ಸ್ವಯಂಪ್ರೇರಿತವಾಗಿ ಬಾಡಿಗೆಗೆ ತಮ್ಮ ಟ್ಯಾಂಕರ್ ಗಳನ್ನು ಮಂಡಳಿಗೆ ನೀಡಲು ಮುಂದೆ ಬಂದಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ನಗರದಲ್ಲಿ ಬೇಕಾಬಿಟ್ಟಿಯಾಗಿ ಬೊರವೆಲ್‍ಗಳನ್ನು ಕೊರೆಯುವುದರ ಬದಲು ನೀರಿನ ಲಭ್ಯತೆ ಆಧರಿಸಿ ಭೂವಿಜ್ಞಾನಿಗಳ ವರದಿಯ ಆಧಾರದ ಮೇಲೆ ಬೊರವೆಲ್‍ಗಳನ್ನು ಕೊರೆಯಿಸಲು ಮಂಡಳಿ ಉದ್ದೇಶಿಸಿದ್ದು,ಇದಕ್ಕಾಗಿ 4 ಜನ ಭೂವಿಜ್ಞಾನಿಗಳನ್ನು ಸಹ ತೆಗೆದುಕೊಳ್ಳಲಾಗಿದೆ ಎಂದರು.


ಮಾ.15ರಿಂದ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೇ ದಂಡ:
ಕಾವೇರಿ ನೀರನ್ನು ಕುಡಿಯುವ ಉದ್ದೇಶ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಈಗಾಗಲೇ ಜಲಮಂಡಳಿಯ ಕಾಯ್ದೆ ಅಡಿ ಆದೇಶ ಹೊರಡಿಸಲಾಗಿದ್ದು,ಜನರು ಸಹ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅವರು ಮಾ.15ರಿಂದ ಇದನ್ನು ಅನುಷ್ಠಾನಗೊಳಿಸಲಾಗುವುದು; ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಸ್ಥಳದಲ್ಲಿಯೇ ಆದೇಶದ ಅನುಸಾರ ದಂಡ ವಿಧಿಸಲಿದ್ದಾರೆ;ಈ ಕುರಿತು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.


ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ನೀರು ಬಳಕೆ ಕುರಿತು ಗೈಡ್‍ಲೈನ್ಸ್‍ಗಳನ್ನು ಸಂಬಂಧಿಸಿದವರೊಂದಿಗೆ ಕುಳಿತು ಚರ್ಚಿಸಿ ಹೊರಡಿಸಲಾಗುವುದು ಎಂದರು.


ಈ ಸಂದರ್ಭದಲ್ಲಿ ಮಂಡಳಿ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಐಐಎಸ್‍ಸಿ ತಜ್ಞರಾದ ಪ್ರೊ.ವಿಶ್ವನಾಥ, ಚೀಪ್ ಎಂಜನಿಯರ್ ಜಯಪ್ರಕಾಶ ಮತ್ತಿತರರು ಇದ್ದರು.

Related Articles

Back to top button