GIT add 2024-1
Laxmi Tai add
Beereshwara 33

*ರಾಜ್ಯದಲ್ಲಿ ಸುದ್ದಿ ಮಾಡಿದ ಯುವಕ ಆತ್ಮಹತ್ಯೆ ಪ್ರಕರಣ: ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಖಂಡ್ರೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಇಡೀ ರಾಜ್ಯದಲ್ಲಿ ಸುದ್ದಿ ಆಗಿತ್ತು, ಇದೀಗ ಅದೆ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ಶೈಲೆಂದ್ರ ಬೇಲ್ದಾಳೆ ಬೇಟಿ ನೀಡಿ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರು ಒದಗಿಸುವ ಭರವಸೆ ನೀಡಿದ್ದಾರೆ.‌

Emergency Service

ಬೀದರ್ ತಾಲೂಕಿನ ಆಣದೂರ ಗ್ರಾಮದ ಮನೆಮನೆಗೆ ಭೇಟಿ ‌ನೀಡಿ, ಶವವಿದ್ದ ಟ್ಯಾಂಕ್ ನೀರು‌ ಕುಡಿದ ಜನರ ಆರೋಗ್ಯವನ್ನ ಖುದ್ದಾಗಿ ವಿಚಾರಣೆ ಮಾಡಿದ ಸಚಿವ ಹಾಗೂ ಶಾಸಕರು, ಈಗಾಗಲೇ ಜಿಲ್ಲಾಧಿಕಾರಿಗೆ ಹಾಗೂ ಪಂಚಾಯತ ಸಿಬ್ಬಂದಿಗೆ ವಾಟರ್ ಟ್ಯಾಂಕ್ ಸ್ವಚ್ಚಗೊಳಿಸಲು ಸೂಚನೆ ನೀಡಿದ್ದೇನೆ, ಅಷ್ಟೆ ಅಲ್ಲದೇ ಶುದ್ದ ಕುಡಿಯುವ ನೀರು ಪುರೈಸುವಂತೆ ಸೂಚನೆ ನೀಡಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ರು.

ಶವವಿದ್ದ ವಾಟರ್ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನೆ ಗ್ರಾಮಸ್ಥರು ಮೂರು ದಿನಗಳ ಕಾಲ ಕುಡಿದಿದ್ದು, ಗ್ರಾಮಸ್ಥರ ಆರೋಗ್ಯದಲ್ಲಿ ಏರುಪೇರಾದರೇ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲೆ ವಾಸ್ತವ್ಯ ಹೂಡಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

Bottom Add3
Bottom Ad 2