ಪ್ರಗತಿವಾಹಿನಿ ಸುದ್ದಿ, ಗೋಕಾಕ :
ಹಿಡಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಸಿಬಿಸಿ ಕಾಲುವೆಗೆ ನಾಳೆಯಿಂದ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಹೇಳಿಕೆ ನೀಡಿರುವ ಅವರು, ನಾಳೆ ದಿ. ೯ ರಿಂದ ಸಂಜೆ ೭ ಗಂಟೆ ನಂತರ ಹಿಡಕಲ್ ಜಲಾಶಯದಿಂದ ನೀರು ಹರಿಯಲಿದೆ ಎಂದು ಹೇಳಿದ್ದಾರೆ.
ಘಟಪ್ರಭಾ ಬಲದಂಡೆ ಕಾಲುವೆಗೆ ೧೦೦೦ ಕ್ಯೂಸೆಕ್ಸ್ ಮತ್ತು ಚಿಕ್ಕೋಡಿ ಬ್ರ್ಯಾಂಚ್ ಕಿನಾಲ್(ಸಿಬಿಸಿ)ಗೆ ೩೦೦ ಕ್ಯೂಸೆಕ್ಸ್ ನೀರು ಬಿಡುಗಡೆಯಾಗಲಿದೆ. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಹಿತದೃಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿನಂತಿಸಿಕೊಂಡಿದ್ದರಿಂದ, ಅಧಿಕಾರಿಗಳು ಸಭೆ ನಡೆಸಿ ಹಿಡಕಲ್ ಜಲಾಶಯದಿಂದ ನೀರು ಬಿಡಲು ಮುಂದಾಗಿದ್ದಾರೆ. ಜಿಆರ್‌ಬಿಸಿ ಮತ್ತು ಸಿಬಿಸಿ ಕಾಲುವೆಗಳ ವ್ಯಾಪ್ತಿಯ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ