Election NewsKannada NewsKarnataka NewsPolitics
*ವಕ್ಫ್ ಬೋರ್ಡ್ ವಿವಾದ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಉಪಚುನಾವಣೆ ಹೊತ್ತಲ್ಲಿ ವಕ್ಫ್ ಬೋರ್ಡ್ ಜಮೀನು ವಿವಾದವನ್ನೇ ಬಿಜೆಪಿ ಬ್ರಹ್ಮಾಸ್ತ್ರವಾಗಿಸಿಕೊಂಡಿದ್ದು, ತಾಲೂಕು ಕೇಂದ್ರ, ಜಿಲ್ಲಾ ಕೇಂದ್ರ ಸೇರಿದಂತೆ ರಾಜ್ಯಾದ್ಯಂತ ಇಂದು ಪ್ರತಿಭಟನೆ ಮಾಡಲಿದೆ.
ರಾಜ್ಯದ ಎಲ್ಲಾ ಕಡೆ ಬೆಳಗ್ಗೆ 11 ಗಂಟೆಗೆ ಬಿಜೆಪಿ ಪ್ರತಿಭಟನೆ ಮಾಡಲಿದೆ. ಬಳ್ಳಾರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಬಿಜೆಪಿ ಮುಗಿಬೀಳಲಿದೆ.
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.