
ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆಯಲ್ಲಿ ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಹಾಗೂ ಎಲ್ ಡಿ ಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೆರಿ ಸ್ಪರ್ಧಿಸಿದ್ದರು. ಇಂದು ವಯನಾಡ್ ಫಲಿತಾಂಶ ಹೊರಬೀಳಲಿದ್ದು, ಮತಎಣಿಕೆ ಕಾರ್ಯ ನಡೆಯುತ್ತಿದೆ.
ವಯನಾಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ 2,38, 935 ಮತಗಳನ್ನು ಪಡೆದಿದ್ದು, 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ