Kannada NewsKarnataka NewsNationalPolitics

*ವಯನಾಡಿನ ಗುಡ್ಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 108 ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕೆರಳದ ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಗುಡ್ಡ ಕುಸಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 108 ಕ್ಕೇರಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಕೆರಳ ಸಿಎಂ ಪಿಣರಾಯಿ ವಿಜಯನ್ ಅವರು ಮಾಹಿತಿ ನೀಡಿದ್ದು, 128 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಈ ದುರಂತದಲ್ಲಿ ಇನ್ನು ಹಲವರು ಮಣ್ಣಿನಡಿ ಸಿಲುಕಿದ್ದು, ಸ್ಥಳದಲ್ಲಿ ಭಾರತೀಯ ವಾಯಸೇನೆಯೂ ಸಹ ಭರದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

Home add -Advt

ಸದ್ಯದ ಮಾಹಿತಿ ಪ್ರಕಾರ ವಯನಾಡಿನ 34 ಜನ ಮೃತಪಟ್ಟಿದ್ದಾಗಿ ಗುರುತಿಸಲಾಗಿದೆ. ಈಗಾಗಲೇ 25ಕ್ಕೂ ಹೆಚ್ಚು ಶವಗಳನ್ನ ಮೃತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. NDRF, SDRF ಸೇರಿದಂತೆ 200ಕ್ಕೂ ಹೆಚ್ಚು ಭಾರತೀಯ ಯೋಧರು ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಇದಲ್ಲದೇ ಸ್ಥಳದಲ್ಲಿ ಅಗತ್ಯ ವೈದ್ಯಕೀಯ ಸೇವೆಗಾಗಿ ವೈದ್ಯ ತಂಡವನ್ನ ನಿಯೋಜಿಸಲಾಗಿದೆ.

Related Articles

Back to top button