
---LS����
			
ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡುವಿನಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 282ಕ್ಕೆ ಏರಿಕೆ ಆಗಿದ್ದು, ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
150ಕ್ಕೂ ಹೆಚ್ಚು ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾಮೂಹಿಕ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 800ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಸಾಧ್ಯತೆ ಇದೆ.
ಭೂಕುಸಿತ ಪೀಡಿತ ಗ್ರಾಮಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ. ಸೇನೆ, ಸ್ವಯಂಸೇವಕರು, ಪೊಲೀಸರು, ಎನ್‌ಡಿಆರ್‌ಎಫ್ ತಂಡ ಅವಿರತವಾಗಿ ಕಾರ್ಯಾಚರಣೆ ನಡೆಸುತ್ತಿದೆ.
 
					 
				 
					 
					 
					 
					
 
					 
					 
					


