NationalPolitics

*ವಯನಾಡ್ ಭೂ ಕುಸಿತ: 100 ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮನೆ ನಿರ್ಮಾಣ; ಸಿಎಂ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಈವರೆಗೆ 360 ಜನರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಮುಂದುವರೆದಿದೆ.

ವಯನಡ್ ನ ಭೂ ಕುಸಿತದ ಸಂತ್ರಸರಿಗೆ ಕರ್ನಾಟಕ ಸರ್ಕಾರ ಮನೆ ನಿರ್ಮಣ ಮಾಡಿಕೊಡುವ ಭರವಸೆ ನೀಡಿದೆ. ಈ ಮೂಲಕ ಸಂತ್ರಸ್ತರ ನೆರವಿಗೆ ನಿಲ್ಲುವುದಾಗಿ ತಿಳಿಸಿದೆ.

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

ಕೇರಳ ಮುಖ್ಯಮಂತ್ರಿ ಜೊತೆಗೆ ಧೂರವಾಣಿ ಮೂಲಕ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.

ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು.

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button