Election NewsNational

*ವಯನಾಡ್ ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು ಗೊತ್ತೇ?

ಪ್ರಗತಿವಾಹಿನಿ ಸುದ್ದಿ: ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಿರುದ್ದ ನವ್ಯಾ ಹರಿದಾಸ್ ಕಣಕ್ಕಿಳಿಸಿದ ಬಿಜೆಪಿ..

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.

ರಾಹುಲ್ ಗಾಂಧಿಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇಂದು ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.

ಇನ್ನು ಅಕ್ತೋಬರ್ 23ರಂದು ಪ್ರಿಯಾಂಕಾ ಗಾಂಧಿ ವಯನಾಡ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಅಂದು ಬೃಹತ್ ರೋಡ್ ಶೋ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

Home add -Advt
https://pragativahini.com/by-election-bjp-candidates-names-announce

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button