National

*ಅಣ್ಣನಿಂದ ತೆರವಾದ ಸ್ಥಾನಕ್ಕೆ ತಂಗಿ ಕಣಕ್ಕೆ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ*

ಎರಡು ವಿಧಾನಸಭಾ ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ

Home add -Advt

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಉಪಚುನಾವಣೆಗೆ ಎಐಸಿಸಿ ಪ್ರಿಯಾಂಕಾ ಗಾಂಧಿ ಅವರನ್ನು ಅಧಿಕೃತವಾಗಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆಯಾಗಿದೆ. ಈ ಮೂಲಕ ಅಣ್ಣನಿಂದ ತೆರವಾದ ಸ್ಥಾನಕ್ಕೆ ತಂಗಿ ಕಣಕ್ಕಿಳಿದಿದ್ದಾರೆ.

ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ರಾಹುಲ್ ಮಾಂಕುಟತ್ತಿಲ್ಲ ಹಾಗೂ ಚೆಲ್ಲಕ್ಕಾರ್ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ನವೆಂಬರ್ 13ರಂದು ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

Related Articles

Back to top button