ಪ್ರಗತಿವಾಹಿನಿ ಸುದ್ದಿ : 2025 ರಲ್ಲಿ ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಐಸಿಸಿಗೆ ತಿಳಿಸಿದೆ.
ಭಾರತ ಸರ್ಕಾರದಿಂದ ಸಲಹೆ ಪಡೆದ ನಂತರ ರೋಹಿತ್ ಶರ್ಮಾ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಹೇಳಿದ್ದು, ಅದರಂತೆ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯನ್ನು ಪರಿಗಣಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ.
ಇಂದಿನವರೆಗೆ ಹೈಬ್ರಿಡ್ ಮಾದರಿಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ, ಮತ್ತು ಅಂತಹ ಮಾದರಿಯ ಬಗ್ಗೆ ಚರ್ಚಿಸಲು ನಾವು ಸಿದ್ಧರಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಕ್ಸಿನ್ ನವ್ವ ಹೇಳಿದ್ದರು.
ಇದೀಗ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಬಿಸಿಸಿಐ ತಿಳಿಸಿದ್ದು, ಹೀಗಾಗಿ ಪಂದ್ಯವನ್ನು ಹೈಬ್ರಿಡ್ ಮಾದರಿಯಲ್ಲಿ ದುಬೈ ನಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ