Kannada NewsKarnataka NewsNationalPolitics

*ನಿಮ್ಮ ಜೊತೆ ನಾವಿದ್ದೇವೆ. ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ ಕೆ ಶಿವಕುಮಾರ್ ಅಭಯ*

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಜೊತೆ ಸಿಎಂ ವೀಡಿಯೋಕಾಲ್ ಸಂಭಾಷಣೆ

ಪ್ರಗತಿವಾಹಿನಿ ಸುದ್ದಿ: “ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ’ ಎಂದು ಸಿಎಂ ಡಿ ಕೆ ಶಿವಕುಮಾರ್  ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು. 

ನವದೆಹಲಿಯ ಪ್ರವಾಸದಲ್ಲಿರುವ ಸಿಎಂ ಅವರು, ಗುರುವಾರ ಅಲ್ಲಿಂದಲೇ ವೀಡಿಯೋ ಕರೆ ಮಾಡಿ ಮಾತನಾಡಿ, ಸಂಕಷ್ಟದಲ್ಲಿರುವ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಿದರು. 

“ಕರ್ನಾಟಕದಿಂದ ನೇಪಾಳ ಪ್ರವಾಸಕ್ಕೆ ಹೊರಟವರ ಸಂಪರ್ಕ ಕಡಿತವಾಗಿದೆ. ಹುಡುಕಾಟದ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಯಾರೂ ಕೂಡ ಎದೆಗುಂದುವ ಅಗತ್ಯವಿಲ್ಲ. ನಾವೆಲ್ಲ ಕನ್ನಡಿಗರು. ನಮ್ಮ ಸರ್ಕಾರ ನಿಮ್ಮ ಜೊತೆಯಲ್ಲಿರುತ್ತದೆ’ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button