Kannada NewsKarnataka News
ಕ್ಷೇತ್ರದ ಜನರು ಕುಟುಂಬದ ಸದಸ್ಯರು ಎಂದು ತಿಳಿದು ಕೆಲಸ ಮಾಡುತ್ತಿದ್ದೇವೆ -ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಶಾಸಕ ಗಣೇಶ ಹುಕ್ಕೇರಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಮಹಾದೇವ ಮಂದಿರದ ಶಂಕುಸ್ಥಾಪನೆ, ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಲೋಕಾರ್ಪಣೆ ಕಾಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಬಳಿಕ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. 1.59 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಎಲ್ಲರ ಸಹಕಾರದಿಂದ ಕೊರೊನಾ ನಿಯಂತ್ರಿಸಬೇಕಾಗಿದೆ ಎಂದರು.


ಈ ಸಂದರ್ಭದಲ್ಲಿ ತಾಪಂ ಸದಸ್ಯ ರವೀಂದ್ರ ಮಿರ್ಜೆ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ಪಾಟೀಲ, ಎಲ್.ಬಿ.ಖೋತ, ರಾಜೇಂದ್ರ ಕರಾಳೆ, ಪ್ರಕಾಶ ರಾಚನ್ನವರ, ಅಶೋಕ ಮಿರ್ಜೆ, ಪ್ರಕಾಶ ಮಿರ್ಜೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.