Belagavi NewsBelgaum NewsKarnataka NewsPolitics

*ಮೃತದೇಹ ತರಲು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದೇಹ ತರಲು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಬೆಳಗಾವಿ ಡಿಸಿ ಮೃತ ದೇಹಗಳನ್ನು ರಿಸೀವ್ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಂಭಮೇಳದಿಂದ ಮೃತದೇಹ ತರಲು ಏರ್ ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮಾತ್ರ ಸಿಕ್ಕಿದೆ. 8 ಜನ ಮಿಸ್ಸಿಂಗ್ ಆಗಿರೋ ಬಗ್ಗೆ ಮಾಹಿತಿ ಇಲ್ಲ. ಮೃತರ ಕುಟುಂಬಗಳಿಗೆ ಜಿಲ್ಲಾ ಮಂತ್ರಿಗಳು ಪರಿಹಾರ ಘೋಷಣೆ ಮಾಡ್ತಾರೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button