Belagavi NewsBelgaum NewsKannada NewsKarnataka NewsLatest
ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪೃಥ್ವಿ ಸಿಂಗ್ ಎನ್ನುವವರ ಮೇಲಿನ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರುದ್ದೇಶಪೂರ್ವಕವಾಗಿ ಆತ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾನೆ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಿ ಎಂದು ಅವರು ಹೇಳಿದ್ದಾರೆ.